My Blog List

Friday, November 22, 2019

ಬಿಜೆಪಿಯಿಂದ ಶರತ್ ಬಚ್ಚೇಗೌಡ, ಕವಿರಾಜ್ ಅರಸ್ ಉಚ್ಛಾಟನೆ

ಬಿಜೆಪಿಯಿಂದ ಶರತ್ ಬಚ್ಚೇಗೌಡ,
  ಕವಿರಾಜ್ ಅರಸ್ ಉಚ್ಛಾಟನೆ
2019: ಬೆಂಗಳೂರು: ಶರತ್ ಬಚ್ಚೇಗೌಡ ಮತ್ತು ಕವಿರಾಜ್ ಅರಸ್ ಅವರನ್ನು ಭಾರತೀಯ ಜನತಾ ಪಕ್ಷವು (ಬಿಜೆಪಿ) ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪ್ರಾಥಮಿಕ ಸದಸ್ಯತ್ವದಿಂದ 2019 ನವೆಂಬರ್ 21ರ ಗುರುವಾರ ಉಚ್ಛಾಟಿಸಿತು.

ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಸ್ಪರ್ಧಿಸಿದ ಕಾರಣಕ್ಕೆ ಶರತ್ ಮತ್ತು ಕವಿರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಯಿತು. ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವುದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರನ್ನೂ  ಉಚ್ಛಾಟಿಸಿ ಆದೇಶ ಹೊರಡಿಸಿದರು.

ಹೊಸಕೋಟೆಯಲ್ಲಿ ಕಾಂಗ್ರೆಸ್ಸಿನಿಂದ ಬಂದಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಅವರು ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಈದಿನ ಬೆಳಗ್ಗಿನವರೆಗೂ ಬಿಜೆಪಿ ನಾಯಕರು ಮಾಡಿದ ಪ್ರಯತ್ನ ಫಲಕೊಡಲಿಲ್ಲ.  ಇದನ್ನು ಅನುಸರಿಸಿ ಶರತ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಛಾಟಿಸಲಾಯಿತು.

ಚಿಕ್ಕಬಳ್ಳಾಪುರ ಬಿಜೆಪಿ ಸಂಸತ್ ಸದಸ್ಯ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರು ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದರು.

ಹೊಸಪೇಟೆ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾಗಿರುವ ಕವಿರಾಜ್ ಅರಸ್ ಅವರು ವಿಜಯನಗರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಆನಂದ್ ಸಿಂಗ್ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ಧಾರೆ. ಕಾರಣಕ್ಕೆ ಅವರನ್ನೂ ಉಚ್ಛಾಟಿಸಲಾಯಿತು.

No comments:

Advertisement