My Blog List

Friday, November 8, 2019

ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ; ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ

ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ; ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ
ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಮತ್ತು ಸುಧೀರ್ ಮುಂಗಾಟಿವರ್ ನೇತೃತ್ವದ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು 2019 ನವೆಂಬರ್ 07ರ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿತು.
ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಪಾಟೀಲ್, ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಕುರಿತು ಕಾನೂನು ಅವಕಾಶದ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಈಮಧ್ಯೆ,ಮ ಬಿಜೆಪಿಯೊಂದಿಗೆ ತಮ್ಮ ಪಕ್ಷದ ಸುದೀರ್ಘ ಮೈತ್ರಿಯನ್ನು ಕೊನೆಗೊಳಿಸುವ ಯಾವುದೇ ಇರಾದೆ ತಮಗಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ಭವ್ ಠಾಕ್ರೆ ಅವರು ಹೇಳಿದರು. ಆದರೆ ಲೋಕಸಭಾ ಚುನಾವಣೆಗೂ ಮೊದಲು ತಮ್ಮ ನಡುವೆ ಆಗಿರುವ ಒಪ್ಪಂದಕ್ಕೆ ಬದ್ಧವಾಗಿರುವಂತೆ ಅವರು ಬಿಜೆಪಿಯನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ನೂತನ ಮೈತ್ರಿ ಸರ್ಕಾರದಲಿ ಹುದ್ದೆಗಳು ಮತ್ತು ಜವಾಬ್ದಾರಿಗಳ ಸಮಾನ ಹಂಚಿಕೆ ಸೂತ್ರಕ್ಕೆ ಉದ್ಭವ್ ಪಟ್ಟುಹಿಡಿದಿದ್ದಾರೆ.
ಇನ್ನೊಂದೆಡೆ ಶಿವಸೇನೆಯ ಎಲ್ಲಾ ಶಾಸಕರು ತಮ್ಮ ಪಕ್ಷದ ನಾಯಕ ಉದ್ಭವ್ ಠಾಕ್ರೆ ಅವರು ತೆಗೆದುಕೊಳ್ಳುವ ತಿರ್ಮಾನಗಳಿಗೆ ಬದ್ಧರಾಗಿರಲು ನಿರ್ಧರಿಸಿದ್ದಾರೆ. ಗುರುವಾರ ಶಿವಸೇನೆಯ ನೂತನ ಶಾಸಕರ ಸಭೆಯ ಬಳಿಕ ಶಾಸಕ ಸುನಿಲ್ ಪ್ರಭು ಅವರು ಮಾತನಾಡಿ, ’ಉದ್ಭವ್ ಠಾಕ್ರೆ ತೆಗೆದುಕೊಳ್ಳುವ ಯಾವುದೇ ತೀರ್ಮಾನಗಳಿಗೂ ನಾವೆಲ್ಲಾ ಬದ್ಧರಾಗಿರುತ್ತೇವೆ ಮತ್ತು ಈ ಸೂಕ್ಷ್ಮ ರಾಜಕೀಯ ಸನ್ನಿವೇಶದಲ್ಲಿ ನಾವೆಲ್ಲಾ ಜೊತೆಯಾಗಿರುತ್ತೇವೆ’  ಎಂದು ಹೇಳಿದರು.
ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮತ್ತು ಮೈತ್ರಿ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಹೊಣೆಗಾರಿಕೆಯನ್ನು ಶಿವಸೇನೆಯ ಎಲ್ಲಾ ಶಾಸಕರು ಉದ್ಭವ್ ಠಾಕ್ರೆ ಅವರಿಗೇ ಬಿಟ್ಟುಬಿಟ್ಟಿದ್ದಾರೆ.
ಈತನ್ಮಧ್ಯೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ರಾಜ್ಯದ ಅಡ್ವೊಕೇಟ್ ಜನರಲ್ ಆಗಿರುವ ಅಶುತೋಷ್ ಕುಂಭಕೋಣಿ ಅವರನ್ನು ರಾಜಭವನಕ್ಕೆ ಕರೆಯಿಸಿಕೊಂಡು ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಿದರು ಎಂದು ವರದಿಗಳು ಹೇಳಿವೆ.

No comments:

Advertisement