Friday, November 15, 2019

ರಾಹುಲ್ ಗಾಂಧಿಗೆ ಎಚ್ಚರಿಕೆ, ನ್ಯಾಯಾಂಗ ನಿಂದನೆ ಖಟ್ಲೆ ರದ್ದು

ರಾಹುಲ್ ಗಾಂಧಿಗೆ ಎಚ್ಚರಿಕೆ, ನ್ಯಾಯಾಂಗ ನಿಂದನೆ ಖಟ್ಲೆ ರದ್ದು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ, ’ಚೌಕೀದಾರ್‌ಚೋರ್ ಹೈ ಎಂದು ನ್ಯಾಯಾಲಯವನ್ನೇ ಉಲ್ಲೇಖಿಸಿ ಮಾತನಾಡಿದ್ದ ರಾಹುಲ್ ಗಾಂದಿ ಅವರಿಗೆ, ಭವಿಷ್ಯದಲ್ಲಿಎಚ್ಚರಿಕೆಯಿಂದ ಮಾತನಾಡುವಂತೆ ಪೀಠವು ಎಚ್ಚರಿಕೆ ನೀಡಿ ಅವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಖಟ್ಲೆಯನ್ನೂ ಕೂಡಾ ಸುಪ್ರೀಂಕೋರ್ಟ್  2019 ನವೆಂಬರ್ 14ರ ಗುರುವಾರ ರದ್ದು ಪಡಿಸಿತು.

ರಫೇಲ್‌ಯುದ್ಧ ವಿಮಾನಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ’ಚೌಕೀದಾರ್‌ಚೋರ್ ಹೈ ಎಂಬುದಾಗಿ ಸುಪ್ರೀಂಕೋರ್ಟ್ ಹೇಳಿದೆ ಎಂಬ ಕಾಂಗ್ರೆಸ್ ಹಿಂದಿನ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆ ವಿರುದ್ಧ ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಕ್ಷಮೆಯಾಚನೆಯನ್ನು ಅಂಗೀಕರಿಸಿದ ಪೀಠ ನ್ಯಾಯಾಂಗ ನಿಂದನೆ ಪ್ರಕರಣಕೈ ಬಿಟ್ಟಿರುವುದಾಗಿ ತೀರ್ಪು ನೀಡಿತು.

ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ತ್ರಿಸದಸ್ಯ ಪೀಠವು, ’ಚೌಕೀದಾರ್‌ಚೋರ್ ಹೈ ಎಂಬ ಹೇಳಿಕೆ ಕುರಿತು ರಾಹುಲ್‌ಗಾಂಧಿ ಸಲ್ಲಿಸಿದ್ದ ಕ್ಷಮೆಯಾಚನೆ ಪ್ರಮಾಣ ಪತ್ರವನ್ನು  ಸ್ವೀಕರಿಸಿ, ಮುಂದಕ್ಕೆ ಎಚ್ಚರಿಕೆಯಿಂದ ಹೇಳಿಕೆ ನೀಡುವಂತೆ ನಿರ್ದೇಶಿಸಿ ಮೊಕದ್ದಮೆಯನ್ನು ಕೈಬಿಟ್ಟಿರುವುದಾಗಿ ಹೇಳಿತು.

ರಫೇಲ್‌ಯುದ್ಧ ವಿಮಾ ಖರೀದಿ ವಿಚಾರದಲ್ಲಿ ಚೌಕೀದಾರ್ ಚೋರ್ ಹೈ ಎಂಬ ತನ್ನ ಹೇಳಿಕೆಯನ್ನು ಸುಪ್ರೀಂಕೋರ್ಟ್ ಒಪ್ಪಿದೆ ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಖಟ್ಲೆ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ತ್ರಿಸದಸ್ಯ ಪೀಠ, ಈ ಬಗ್ಗೆ ಒಂದೋ ಕ್ಷಮೆ ಕೇಳಿ, ಇಲ್ಲವೇ ವಿಚಾರಣೆ ಎದುರಿಸಿ ಎಂದು ರಾಹುಲ್ ಗಾಂಧಿಗೆ ಸೂಚಿಸಿತ್ತು. ಬಳಿಕ ರಾಹುಲ್ ಗಾಂದಿ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಅಲ್ಲದೇ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರವನ್ನೂ ಸಲ್ಲಿಸಿದ್ದರು.

No comments:

Advertisement