Thursday, November 14, 2019

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಗುರುವಾರ ಸುಪ್ರೀಂ ತೀರ್ಪು

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಗುರುವಾರ ಸುಪ್ರೀಂ  ತೀರ್ಪು
ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್  2019 ನವೆಂಬರ್ 14ರ ಗುರುವಾರ ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ರೋಹಿಂಟನ್ ನಾರಿಮನ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೊತ್ರಾ ಒಳಗೊಂಡ ನ್ಯಾಯಪೀಠ ತೀರ್ಪು ನೀಡಲಿದೆ.

ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು 2018 ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

5
ವರ್ಷದಿಂದ 50 ವರ್ಷ ವಯಸ್ಸಿನವರೆಗಿನ ಮಹಿಳೆಯರು ದೇಗುಲ ಪ್ರವೇಶಿಸಬಾರದು ಎಂಬ ನಿಯಮವನ್ನು 2018 ಸೆಪ್ಟೆಂಬರ್ 28ರಂದು ರದ್ದುಪಡಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಅಂದಿನ
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ, ನ್ಯಾಯಮೂರ್ತಿಗಳಾದ ರೋಹಿಂಟನ್ ನಾರಿಮನ್, .ಎಂ.ಖಾನ್ವಿಲ್ಕರ್ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೊತ್ರಾ ಅವರಿದ್ದ ನ್ಯಾಯಪೀಠ 4:1 ತೀರ್ಪು ನೀಡಿತ್ತು. ನಾಲ್ವರು ನ್ಯಾಯಮೂರ್ತಿಗಳು ತೀರ್ಪಿನ ಪರ ಇದ್ದರೆ ಇಂದು ಮಲ್ಹೊತ್ರಾ ಮಾತ್ರ ತೀರ್ಪಿಗೆ ಸಹಮತ ವ್ಯಕ್ತಪಡಿಸಿರಲಿಲ್ಲ. ಧಾರ್ಮಿಕ ಆಚರಣೆಗಳನ್ನು ಸಂವಿಧಾನದ 14ನೇ ವಿಧಿ ಅನ್ವಯ ಪರಿಗಣಿಸಲಾಗದು ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಸುಪ್ರೀಂ ಕೋರ್ಟ್ತೀರ್ಪಿನ ಅನುಷ್ಠಾನ ವಿಚಾರವಾಗಿ ಕೇರಳದಲ್ಲಿ ರಾಜಕೀಯ ಸಂಘರ್ಷಗಳೂ ನಡೆದಿದ್ದವು. ಬಳಿಕ ತೀರ್ಪಿನ ಮರುಪರಿಶೀಲನೆಗೆ ಕೋರಿ ಸುಮಾರು 56 ಅರ್ಜಿಗಳು ಹಾಗೂ ಕೆಲವು ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ವಿಚಾರಣೆಯನ್ನು 2019 ಫೆಬ್ರುವರಿ 6ರಂದು ಮುಕ್ತಾಯಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

No comments:

Advertisement