My Blog List

Saturday, December 14, 2019

ಫೋರ್ಬ್ಸ್: ವಿಶ್ವದ ೧೦೦ ಪ್ರಭಾವಿ ಮಹಿಳೆಯರಲ್ಲಿ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್

ಫೋರ್ಬ್ಸ್: ವಿಶ್ವದ ೧೦೦ ಪ್ರಭಾವಿ ಮಹಿಳೆಯರಲ್ಲಿ
ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್
ನ್ಯೂಯಾರ್ಕ್: ಫೋರ್ಬ್ಸ್ ೧೦೦ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ವಿತ್ತ  ಸಚಿವೆ ನಿರ್ಮಲಾ ಸೀತಾರಾಮನ್, ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶನಿ ನಡಾರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಸ್ಥಾನಪಡೆದರು.
ಮೊದಲ ಬಾರಿಗೆ ಫೋರ್ಬ್ಸ್ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ನಿರ್ಮಲಾ ಸೀತಾರಾಮನ್ ಅವರು ೩೪ನೇ ಸ್ಥಾನ ಪಡೆದಿದ್ದಾರೆ.  ಇನ್ನು ರೋಶನಿ ೫೪ನೇ ಹಾಗೂ ಕಿರಣ್ ಮಜುಂದಾರ್ ಶಾ ಅವರು ೬೫ನೇ ಸ್ಥಾನದಲ್ಲಿದ್ದಾರೆ.

ದೇಶದ ಮೊದಲ ಪೂರ್ಣ ಪ್ರಮಾಣದ ವಿತ್ತ  ಸಚಿವೆ ಎಂಬ ಹೆಗ್ಗಳಿಕೆಗೆ ಸೀತಾರಾಮನ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಣಕಾಸು ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.

ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರು ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.  ಯರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನೆ ಲಗಾರ್ಡ್ ಎರಡನೇ ಅಮೆರಿಕ ಸಂಸತ್ತಿನ ಸ್ಪೀಕರ್ ನ್ಯಾನ್ಸಿ ಪೆಲೊಸಿ ಮೂರನೇ ಸ್ಥಾನ ಪಡೆದಿದ್ದಾರೆ.

No comments:

Advertisement