Wednesday, January 8, 2020

ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ನಿಧನ

ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ನಿಧನ
ನೋಯ್ಡಾ: ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿಅವರು 2020 ಜನವರಿ 06ರ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು.

ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನೋಯ್ಡಾದ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ದಾಖಲಿಸಲಾಗಿತ್ತು. ಆದರೆ ಅವರು ಅದಾಗಲೇ ಇಹಲೋಕ ತ್ಯಜಿಸಿದ್ದರು.

ಚತುರ್ವೇದಿಯವರು ೨೦೦೨ರಿಂದ ೨೦೦೭ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.

ಉತ್ತರ ಪ್ರದೇಶದ ಕನೌಜ್ ನಲ್ಲಿ ಜನಿಸಿದ್ದ ತ್ರಿಲೋಕನಾಥ್ ಚತುರ್ವೇದಿ ಅವರು ಐಎಎಸ್ ಅಧಿಕಾರಿಯಾಗಿದ್ದರು. ಭಾರತ ಸರ್ಕಾರದ  ಸಿಎಜಿ ಆಗಿ ಕಾರ್ಯ ನಿರ್ವಹಿಸಿದ್ದ ಅವರಿಗೆ ೧೯೯೧ರಲ್ಲಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು.

ಟಿ ಎನ್ ಚತುರ್ವೇದಿ ಅವರ ಪಾರ್ಥೀವ ಶರೀರವನ್ನು ಸದ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಎರಡು ದಿನಗಳ ನಂತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿತು.

No comments:

Advertisement