Sunday, January 26, 2020

ರಾಷ್ಟ್ರೀಯ ಬಾಲ ಶಕ್ತಿ ಪುರಸ್ಕಾರ ಪಡೆದ ಕನ್ನಡದ ಮಕ್ಕಳು

ರಾಷ್ಟ್ರೀಯ ಬಾಲ ಶಕ್ತಿ ಪುರಸ್ಕಾರ ಪಡೆದ ಕನ್ನಡದ ಮಕ್ಕಳು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮೂಲದ ಮೂವರು ಮಕ್ಕಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ೪೯ ಮಕ್ಕಳಿಗೆಬಾಲ ಶಕ್ತಿ ಪುರಸ್ಕಾರ೨೦೨೦ ಪ್ರಶಸ್ತಿಯನ್ನು 2020 ಜನವರಿ 25ರ ಶನಿವಾರ ಪ್ರದಾನ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಾಲಕಿ ಮೂರ್ಜೆ ಸುನಿತಾ ಪ್ರಭು ಶೈಕ್ಷಣಿಕ, ಬೆಂಗಳೂರಿನ ಪ್ರಗುನ್ ಪುದುಕೊಳಿ ಕಲೆ ಮತ್ತು ಸಂಸ್ಕೃತಿ ಮತ್ತು ಬೆಂಗಳೂರಿನ ಯಶ್ ಆರಾಧ್ಯಾ ಕ್ರೀಡಾ ವಿಭಾಗದಲ್ಲಿ ಪುರಸ್ಕಾರಕ್ಕೆ ಪಾತ್ರರಾದರು.
ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ ಪಡೆದ ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ ನರೇಂದ್ರ ಮೋದಿ, ಇಂತಹ ಪ್ರತಿಭೆಗಳಿಂದ ನಾನು ಸ್ಫೂರ್ತಿ ಮತ್ತು ಶಕ್ತಿಯನ್ನು ಪಡೆಯುತ್ತೇನೆ. ಸಮಾಜ ಮತ್ತು ರಾಷ್ಟ್ರದ ಬಗೆಗಿನ ತಮ್ಮ ಕರ್ತವ್ಯದ ಅರಿವನ್ನು ಹೊಂದಿರುವ ಮಕ್ಕಳನ್ನು ನೋಡಿ ಹೆಮ್ಮೆ ಪಡುತ್ತೇನೆ ಎಂದು ಹೇಳಿದರು.

ಸ್ವಲ್ಪ ಸಮಯದ ಹಿಂದೆ ನಾನು ನಿಮಗೆ ಪರಿಚಯವಾದಾಗ, ನನಗೆ ನಿಜಕ್ಕೂ ಆಶ್ಚರ್ಯವಾಯಿತು. ನೀವೆಲ್ಲರೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಾಡಿದ ಕೆಲಸ ಅದ್ಭುತವಾಗಿದೆ. ನಿಮ್ಮೆಲ್ಲ ಧೈರ್ಯಶಾಲಿ ಕೆಲಸದ ಬಗ್ಗೆ ಕೇಳಿದಾಗಲೆಲ್ಲಾ, ನಿಮ್ಮೊಂದಿಗೆ ಮಾತನಾಡಿದಾಗೆಲ್ಲ ನನಗೆ ಸ್ಫೂರ್ತಿ ಮತ್ತು ಶಕ್ತಿಯೂ ಸಿಗುತ್ತದೆಎಂದು ಹೇಳಿದರು.

ಪ್ರಧಾನಮಂತ್ರಿ ಬಾಲ ಪುರಸ್ಕಾರ ೨೦೨೦ ಪ್ರಶಸ್ತಿ ಪಡೆದ ಎಲ್ಲ ಯುವ ವಿಜೇತರ ಫೋಟೊಗಳನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ, ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

No comments:

Advertisement