My Blog List

Thursday, January 2, 2020

ಇಂಡಿಯಾ ಗೇಟಿಗಿಂತ ಎತ್ತರದ ಕಟ್ಟಡ ನಿರ್ಮಾಣಕ್ಕೆ ತಡೆ

ಇಂಡಿಯಾ ಗೇಟಿಗಿಂತ ಎತ್ತರದ ಕಟ್ಟಡ ನಿರ್ಮಾಣಕ್ಕೆ ತಡೆ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನು ಮಂದೆ ೪೨ ಮೀಟರಿಗಿಂತ ಎತ್ತರದ ಕಟ್ಟಡ ನಿರ್ಮಿಸುವಂತಿಲ್ಲ. ಕೇಂದ್ರೀಯ ಭಾಗದಲ್ಲಿ ಕೇಂದ್ರ ಸರ್ಕಾರದ ಸಚಿವಾಲಯಗಳು, ನೂತನ ಸಂಸತ್ ಭವನ, ರಾಜಪಥವನ್ನು ನವೀಕರಣಗೊಳಿಸಲಾಗುತ್ತಿದ್ದು, ಎಲ್ಲ ಕಟ್ಟಡಗಳು ಕೂಡ ಏಕರೂಪತೆಯಿಂದ ಕೂಡಿರಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ 2020 ಜನವರಿ 01ರ ಬುಧವಾರ ಈ ನಿರ್ಧಾರ ಕೈಗೊಂಡಿತು.

ಐತಿಹಾಸಿಕ ದೆಹಲಿ ಗೇಟ್ ೪೨ ಮೀಟರ್ ಎತ್ತರವಿದ್ದು, ಮುಂದೆ ನಿರ್ಮಾಣವಾಗುವ ಯಾವುದೇ ಕಟ್ಟಡಗಳು ಇದಕ್ಕಿಂತ ಒಂದು ಇಂಚು ಎತ್ತರ ಕೂಡ ಇರುವಂತಿಲ್ಲ.

ಮೂರು ಕಟ್ಟಡಗಳ ನಿರ್ಮಾಣದ ಗುತ್ತಿಗೆ ಗುಜರಾತ್ ಮೂಲದ ಎಚ್ಸಿಪಿ ಡಿಸೈನ್ ಸಂಸ್ಥೆಗೆ ನೀಡಲಾಗಿದೆ. ೨೦೨೨ಕ್ಕೆ ೭೫ನೇ ಸ್ವಾತಂತ್ರೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಭವನವನ್ನು ಅವಧಿಯೊಳಗೆ ನಿರ್ಮಿಸಲು ಉದ್ದೇಶಿಸಲಾಗಿದೆ. ಉಳಿದ ಕಟ್ಟಡಗಳನ್ನು ೨೦೨೪ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಸುಮಾರು ೧೨ ಸಾವಿರ ಕೋಟಿ ರೂ.ವೆಚ್ಚದ ಯೋಜನೆ ಇದಾಗಿದೆ.

ರಾಷ್ಟ್ರಪತಿ ಭವನವು ೩೪೫ ಎಕರೆ ವಿಸ್ತೀರ್ಣ ಹೊಂದಿದ್ದು, ಪೈಕಿ ೬೦ ಎಕರೆಯಲ್ಲಿ ಜೈವಿಕ ಉದ್ಯಾನ ನಿರ್ಮಿಸಲು ಪ್ರಸ್ತಾವನೆ ಇದೆ. ಜೊತೆಗೆ ಉಪರಾಷ್ಟ್ರಪತಿ ಹಾಗೂ ಪ್ರಧಾನಿ ನಿವಾಸವನ್ನು ಕೂಡ ನವೀಕರಿಸುವ ಸಾಧ್ಯತೆ ಇದೆ.

No comments:

Advertisement