My Blog List

Tuesday, January 28, 2020

ಸಿಎಎ ವಿರೋಧಿ ನಿರ್ಣಯಕ್ಕೆ ಪಶ್ಚಿಮ ಬಂಗಾಳ ಅಸೆಂಬ್ಲಿ ಅಸ್ತು

ಸಿಎಎ ವಿರೋಧಿ ನಿರ್ಣಯಕ್ಕೆ ಪಶ್ಚಿಮ ಬಂಗಾಳ ಅಸೆಂಬ್ಲಿ ಅಸ್ತು
ಕೋಲ್ಕತಾ: ಕೇರಳ, ಪಂಜಾಬ್ ಮತ್ತು ರಾಜಸ್ಥಾನದ ನಂತರ, ಪಶ್ಚಿಮ ಬಂಗಾಳವು  2020 ಜನವರಿ 27ರ ಸೋಮವಾರ  ವಿಧಾನಸಭೆಯಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ೪ನೇ ರಾಜ್ಯವಾಯಿತು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಪ್ರಸ್ತಾಪಿತ ರಾಷ್ಟ್ರೀಯ ಪೌರ ನೋಂದಣಿಯನ್ನು ಜಾರಿಗೆ ತರಬಾರದು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯು ಅಂಗೀಕರಿಸಿದ ನಿರ್ಣಯವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು.

ಬಹುಮತದೊಂದಿಗೆ ಅಂಗೀಕೃತವಾದ ಈ ನಿರ್ಣಯವನ್ನು ಪಶ್ಚಿಮ ಬಂಗಾಳದ ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಅವರು ಸದನದ ವಿಶೇಷ ಅಧಿವೇಶನದಲ್ಲಿ ಮಂಡಿಸಿದರು. ದೇಶವನ್ನು ಧರ್ಮದ ನೆಲೆಯಲ್ಲಿ ವಿಭಜಿಸುವ ಕ್ರಮವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದರು.

No comments:

Advertisement