My Blog List

Sunday, June 28, 2020

ಖ್ಯಾತ ಕಾದಂಬರಿಗಾರ್ತಿ ನಾಡೋಜ ಗೀತಾ ನಾಗಭೂಷಣ ನಿಧನ

ಖ್ಯಾತ ಕಾದಂಬರಿಗಾರ್ತಿ ನಾಡೋಜ ಗೀತಾ ನಾಗಭೂಷಣ ನಿಧನ

ಬೆಂಗಳೂರು:  ಗದಗ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆರಾಗಿದ್ದ ನಾಡೋಜ ಗೀತಾ ನಾಗಭೂಷಣ  ಅವರು 2020 ಜೂನ್ 28 ಭಾನುವಾರ ಹೃದಯಾಘಾತದಿಂದ ನಿಧನರಾದರು.

‘ಬದುಕು’ ಕಾದಂಬರಿಗೆ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.

ಗೀತಾ ನಾಗಭೂಷಣ, ಕಲ್ಬುರ್ಗಿ ಜಿಲ್ಲೆಯ ಹಿಂದುಳಿದ ಸಾವಳಗಿ ಎಂಬ ಪುಟ್ಟ ಹಳ್ಳಿಯಲ್ಲಿ ಮಾರ್ಚ್ ೨೫, ೧೯೪೨ರಲ್ಲಿ ಶಾಂತಪ್ಪ, ಶರಣಮ್ಮದಂಪತಿಗಳ ಮಗಳಾಗಿ ಜನಿಸಿದರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳ ನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ., ಬಿ.ಎಡ್, ಎಂ. ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು.
ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು. ಡಾ. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ.

ಗೀತಾ ಅವರ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರಿತ್ತು. ಹೀಗೆ ಹ್ಯಾಟ್ರಿಕ್ ಮಹಿಳಾ ಸಾಹಿತಿ ಎಂದು ಇವರು ಖ್ಯಾತರಾಗಿದ್ದಾರೆ. ಕೋಲ್ಕತಾದ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ೨೦೧೧-೨೦೧೨ ಡಾ. ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಪ್ರಶಸ್ತಿ ,೦೦,೦೦೦=೦೦ ಮತ್ತು ಸ್ಮರಣಿಕೆಯನ್ನೊಳಗೊಂಡಿದೆ. ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಮೊದಲ ಮಹಿಳಾ ಸಾಹಿತಿ ಕೂಡಾ ಡಾ. ಗೀತಾ ನಾಗಭೂಷಣ. ಪ್ರಶಸ್ತಿ ೩೧.೦೩.೨೦೧೨ ರಂದು ಕೋಲ್ಕತ್ತಾದಲ್ಲಿ ಪ್ರದಾನ ಮಾಡಲಾಗಿತ್ತು.

ಸಾಹಿತ್ಯ ಕೃತಿ:

ಡಾ. ಗೀತಾ ನಾಗಭೂಷಣ ಅವರು ೧೯೬೮ರ ವರ್ಷದಲ್ಲಿ ಪ್ರಕಟಗೊಂಡತಾವರೆಯ ಹೂವು ಕಾದಂಬರಿಯಿಂದ ಮೊದಲ್ಗೊಂಡು ಇತ್ತೀಚಿನಬದುಕುಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರಬದುಕುಕಾದಂಬರಿಗೆ ೨೦೦೪ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಗೀತಾ ನಾಗಭೂಷಣರಹಸಿಮಾಂಸ ಮತ್ತು ಹದ್ದುಗಳುಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು ೨೭ ಸ್ವತಂತ್ರ ಕಾದಂಬರಿ, ೫೦ ಸಣ್ಣ ಕಥೆಗಳು, ಎರಡು ಸಂಕಲನ, ೧೨ ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ:

ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯಲ್ಲಿ ಡಾ. ಗೀತಾ ನಾಗಭೂಷಣರು ಹೇಳಿದ ಮಾತುಗಳು ಮಾರ್ಮಿಕವಾಗಿವೆ. “ವಚನಕಾರರು, ಹರಿದಾಸರು, ತತ್ವಪದಕಾರರು, ಜನಪದರು ಅಂದು ತಮ್ಮ ಸಾಹಿತ್ಯದಿಂದ ಸಾವಿರಾರು ವರ್ಷಗಳ ಉದ್ದಕ್ಕೂ ಮಾಡಿಕೊಂಡು ಬಂದ ಜನಜಾಗೃತಿ, ಶಾಂತಿ ಸೌಹಾರ್ದತೆ, ಪ್ರೀತಿ ವಾತ್ಸಲ್ಯ, ಕ್ರಾಂತಿ ಚಳುವಳಿಗಳ ಮೂಲಕ ಸುಧಾರಣೆ ಮತ್ತು ಜನಹಿತಕಾರ್ಯವನ್ನು ಇಂದಿನ ಸಾಹಿತಿಗಳೂ ಸಾಧಿಸಿ ತೋರಿಸಬೇಕಾಗಿದೆ. ಬರೀ ಶಬ್ದಾಡಂಬರದ ರಂಜನೀಯ ಸಾಹಿತ್ಯ ನಮಗೆ ಬೇಡ, ಸಾಹಿತ್ಯ ಒಂದು ಮಾನಸಿಕ ಸುಧಾರಣೆಯ ಸಾಧನ. ಅದು ಸಮಾಜದ ಅಭ್ಯುದಯಕ್ಕಾಗಿ ದುಡಿಯುವಂತಾಗಬೇಕು. ವಿಜ್ಞಾನಿಯ ತಲೆ, ಸಂತನ ಹೃದಯ ದೇಶಕ್ಕೆ ಬೇಕು. ಬುದ್ಧನ ಕರುಣೆ, ಬಸವನ ಛಲ, ಬಾಬಾ ಸಾಹೇಬರ ಸ್ವಾಭಿಮಾನ ಮತ್ತು ಗಾಂಧೀಜಿಯ ಅಹಿಂಸೆಯ ತುಡಿತ ಎಲ್ಲವನ್ನೂ ಹುರಿಗೊಳಿಸಿ ಹೊಸೆದ ಹಗ್ಗದಿಂದಲೇ ನಾವು ಸರ್ವರ ಅಭ್ಯುದಯ ಸಾಧಿಸಬಲ್ಲ ನಭೋಸ್ಪರ್ಶಿ ವ್ಯವಸ್ಥೆಗೆ ಏಣಿ ಕಟ್ಟಬೇಕಾಗಿದೆ’ ಗದಗ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅವರು ಹೇಳಿದ್ದರು.

ಪ್ರಶಸ್ತಿ ಗೌರವಗಳು

·         ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್,

·         ಅತ್ತಿಮಬ್ಬೆ ಪ್ರಶಸ್ತಿ,

·          ನಾಡೋಜ ಪ್ರಶಸ್ತಿ ಮುಂತಾದ ಹಲವಾರು ಗೌರವಗಳ ಜೊತೆಗೆ, ಡಾ. ಗೀತಾ ನಾಗಭೂಷಣರು ಗದಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.

·         ೨೦೧೨ರ ವರ್ಷದಲ್ಲಿ ಡಾ. ಗೀತಾನಾಗಭೂಷಣರು ಕನ್ನಡಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ.

·         ಅವರಬದುಕುಕಾದಂಬರಿಗೆ ೨೦೦೪ ನೇ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ.

No comments:

Advertisement