ಬಾಳಾಸಾಹೇಬ ಲೋಕಾಪುರಗೆ ‘ಚಾವುಂಡರಾಯ ಪ್ರಶಸ್ತಿ’
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.
ಪರಿಷತ್ತಿನ
ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶನಿವಾರ ಈ ಆಯ್ಕೆ ಮಾಡಲಾಯಿತು.
ಜೈನ
ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿಯು ೩೦ ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.
ಆಯ್ಕೆ ಸಮಿತಿಯ ಸಭೆಯಲ್ಲಿ ಲೇಖಕಿ ಡಾ. ಪದ್ಮಿನಿ ನಾಗರಾಜ್, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ರಾಜಶೇಖರ
ಹತಗುಂದಿ ಹಾಗೂ ವ.ಚ. ಚನ್ನೇಗೌಡ ಇದ್ದರು ಎಂದು ಪ್ರಕಟಣೆ ತಿಳಿಸಿತು.
No comments:
Post a Comment