My Blog List

Friday, October 16, 2020

೭೫ ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ

 ೭೫ ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ

ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) ೭೫ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ೨೦೨೦ ಅಕ್ಟೋಬರ್ ೧೬ರ ಶುಕ್ರವಾರ ೭೫ ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

ವಿಡಿಯೊ ಸಮಾವೇಶದಲ್ಲಿ ಪ್ರಧಾನಿ ನಾಣ್ಯಗಳನ್ನು ಅನಾವರಣಗೊಳಿಸಿದರು. ಇದೇ ಸಮಾರಂಭದಲ್ಲಿ ಅವರು ೧೭ ಹೊಸ ಜೈವಿಕಸಂವರ್ಧಿತ ಬೆಳೆ ಪ್ರಭೇದಗಳನ್ನು ಬಿಡುಗಡೆ ಮಾಡಿದರು. ಕೃಷಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಖರೀದಿಸುವ ನಿಟ್ಟಿನಲ್ಲಿ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಕೇಂದ್ರದ ಮೂರು ಕೃಷಿ ಮಸೂದೆಗಳ ವಿರುದ್ಧ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಮೋದಿ ಕನಿಷ್ಠ ಬೆಂಬಲ ಬೆಲೆಯ ಕುರಿತು ಸರ್ಕಾರದ ನಿಲುವು ಸ್ಪಷ್ಟಪಡಿಸುವ ಪ್ರಯತ್ನವನ್ನು ಕಾರ್ಯಕ್ರಮದ ಮೂಲಕ ಮಾಡಿದರು.

ದೇಶದಲ್ಲಿ ಅಪೌಷ್ಟಿಕತೆ ನಿವಾರಿಸಲು ರಾಗಿ ಮತ್ತು ಹೆಚ್ಚಿನ ಪೌಷ್ಠಿಕಾಂಶದ ಬೆಳೆಗಳನ್ನು ಕೇಂದ್ರವು ಉತ್ತೇಜಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

No comments:

Advertisement