ಗ್ರಾಹಕರ ಸುಖ-ದುಃಖ

My Blog List

Wednesday, December 9, 2020

ರೈತ ಚಳವಳಿ: ರಾಷ್ಟ್ರಪತಿಗೆ ವಿಪಕ್ಷಗಳ ಮನವಿ

 ರೈತ ಚಳವಳಿ: ರಾಷ್ಟ್ರಪತಿಗೆ ವಿಪಕ್ಷಗಳ ಮನವಿ

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ, ವಿರೋಧ ಪಕ್ಷದ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು 2020 ಡಿಸೆಂಬರ್ 09ರ ಬುಧವಾರ ಭೇಟಿ ಮಾಡಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.

ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ವಿರೋಧ ಪಕ್ಷಗಳ ಜಂಟಿ ನಿಯೋಗ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತು.

ನಿಯೋಗದಲ್ಲಿ  ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ಡಿ ರಾಜಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್ವಾದಿ (ಸಿಪಿಐ-ಎಂ) ನಾಯಕ ಸೀತಾರಾಮ್ ಯೆಚೂರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ  (ಡಿಎಂಕೆ) ನಾಯಕ ಟಿಕೆಎಸ್ ಎಳಂಗೋವನ್ ಅವರು ಇದ್ದರು.

ಹತ್ತು ದಿನಗಳಿಂದ ದೇಶಾದ್ಯಂತ ಪ್ರತಿಭಟನೆಗೆ ನಾಂದಿ ಹಾಡಿದ ಮೂರು ಶಾಸನಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿರ್ಣಾಯಕವಾಗಿದೆ ಎಂದು ನಿಯೋಗ ರಾಷ್ಟ್ರಪತಿಗೆ ತಿಳಿಸಿತು.

ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಅವರು ಮನವಿ ಪತ್ರವನ್ನು ಸಲ್ಲಿಸಿದರು.

" ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ಸಂಪೂರ್ಣವಾಗಿ ನಿರ್ಣಾಯಕ ಎಂದು ನಾವು ರಾಷ್ಟ್ರಪತಿಗೆ ತಿಳಿಸಿದ್ದೇವೆ" ಎಂದು ರಾಹುಲ್ ಗಾಂಧಿ ಸಭೆಯ ನಂತರ ಮಾಧ್ಯಮಗಳಿಗೆ ತಿಳಿಸಿದರು.

ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ರೀತಿಯು ರೈತರಿಗೆ ಮಾಡಿದ ಅವಮಾನ ಎಂದು ನಾವು ಭಾವಿಸುತ್ತೇವೆ ಮತ್ತು ಅದಕ್ಕಾಗಿಯೇ ಅವರು ಸರ್ಕಾರದ ವಿರುದ್ಧ ಶೀತ ವಾತಾವರಣದಲ್ಲಿ ಪ್ರತಿಭಟಿಸುತ್ತಿದ್ದಾರೆ ಎಂದು ಅವರು ಹೇಳಿದರು.

"ರೈತರು ಹಿಂದೆ ಸರಿಯುವುದಿಲ್ಲ ಮತ್ತು ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತಾರೆ" ಎಂದು ರಾಹುಲ್ ಗಾಂಧಿ ಹೇಳಿದರು.

ನಾವು ರಾಷ್ಟ್ರಪತಿಗೆ ಮನವಿ ಪತ್ರ ನೀಡಿದ್ದೇವೆ. ಸರಿಯಾದ ಚರ್ಚೆಗಳು ಮತ್ತು ಸಮಾಲೋಚನೆಗಳಿಲ್ಲದೆ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ರದ್ದುಗೊಳಿಸಲು ನಾವು ಕೇಳುತ್ತಿದ್ದೇವೆ ಎಂದು ಯೆಚೂರಿ ಹೇಳಿದರು.

ಎನ್ಸಿಪಿಯ ಶರದ್ ಪವಾರ್ ಅವರು ಶಾಸನಗಳ ಮೇಲಿನ ಸಮಸ್ಯೆಯನ್ನು ಪರಿಹರಿಸುವುದು ಕೇಂದ್ರದ ಕರ್ತವ್ಯವಾಗಿದೆ ಎಂದು ಹೇಳಿದರು.

No comments:

Advertisement