ಗಣರಾಜ್ಯೋತ್ಸವ ಸಂಭ್ರಮ-೨೦೨೫
ಭಾರತದಾದ್ಯಂತ ಜನವರಿ ೨೬ರ ಈದಿನ ೭೬ನೇ ಗಣರಾಜ್ಯೋತ್ಸವವನ್ನು ಸಂಭ್ರಮಾಚರಣೆಯೊಂದಿಗೆ ಆಚರಿಸಲಾಯಿತು.
ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲೂ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಕವಿ, ಬರಹಗಾರ, ಸಮಾಜ ಸೇವಕ ಸ್ಟೀಫನ್ ಜೋಸೆಫ್ ಅವರು ಧ್ವಜಾರೋಹಣ ನೆರವೇರಿಸಿ ದೇಶದ ಬಗ್ಗೆ ತಾವೇ ರಚಿಸಿದ ಕವನವನ್ನು ವಾಚಿಸಿದರು. ಪುಟ್ಟ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು.
ಸಂಘದ ಅಧ್ಯಕ್ಷ ರಾಜೇಶ ಕಮಲಾಕರ ಹೆಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನೆತ್ರಕೆರೆ ಉದಯಶಂಕರ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಈ ಸಂದರ್ಭದ ಕೆಲವು ಚಿತ್ರಗಳು ಇಲ್ಲಿವೆ. ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್ ಮಾಡಿರಿ.
ನೆತ್ರಕೆರೆ ಉದಯಶಂಕರ ಭಟ್
ಕಾರ್ಯಕ್ರಮ ನಿರ್ವಹಣೆ.
ರಾಜೇಶ ಕಮಲಾಕರ ಹೆಗಡೆ ಅಧ್ಯಕ್ಷ ಭಾಷಣ.
ಹಾಗೆಯೇ ರಾಷ್ಟ್ರಮಟ್ಟದಲ್ಲಿ ನಡೆದ ಗಣರಾಜ್ಯೋತ್ಸವದ ಸಂಭ್ರಮವನ್ನು ವೀಕ್ಷಿಸಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿರಿ.
No comments:
Post a Comment