Tuesday, February 4, 2020

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶಾಹೀನ್ ಬಾಗ್ ಪ್ರತಿಭಟನೆ

ಸುಪ್ರೀಂಕೋರ್ಟ್ ಮೆಟ್ಟಿಲೇರಿದ  ಶಾಹೀನ್ ಬಾಗ್ ಪ್ರತಿಭಟನೆ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಶಾಹೀನ್ಬಾಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ  2020 ಫೆಬ್ರುವರಿ 03ರ ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.

ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ಹಾಗೂ ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟಿಗೆ ಮನವಿ ಮಾಡಿದರು.

ನಂದಕಿಶೋರ್ ಗರ್ಗ್ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿ,  ಕಳೆದ ಒಂದೂವರೆ ತಿಂಗಳಿಂದ ದೆಹಲಿಯ ಶಾಹೀನ್ಬಾಗ್, ಕಾಳಿಂಡಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆಎಂದು ತಿಳಿಸಿದರು.

ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರ ದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಸಮಗ್ರ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಸರ್ಕಾ ರಕ್ಕೆ ಸೂಚನೆ ನೀಡಬೇಕು ಎಂದೂ ಅವರು ತಮ್ಮ ಮನವಿಯಲ್ಲಿ ಕೋರಿದರು.

No comments:

Advertisement