Monday, March 23, 2020

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಶಿವರಾಜ್ ಸಿಂಗ್ ಚೌಹಾಣ್ , ಮತ್ತೆ ಬಿಜೆಪಿ ಶಕೆ ಆರಂಭ

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಶಿವರಾಜ್ ಸಿಂಗ್ ಚೌಹಾಣ್ , ಮತ್ತೆ ಬಿಜೆಪಿ ಶಕೆ ಆರಂಭ
ಭೋಪಾಲ್: ಮಧ್ಯ ಪ್ರದೇಶದಲ್ಲಿ ಮತ್ತೆ ಬಿಜೆಪಿ ಶಕೆ ಶುರುವಾಯಿತು.  ಪಕ್ಷದ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಮತ್ತೊಮ್ಮೆ ಮಧ್ಯ ಪ್ರದೇಶ ಸರ್ಕಾರದ ಚುಕ್ಕಾಣಿ ಹಿಡಿದರು. ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅವರು  2020 ಮಾರ್ಚ್ 23ರ ಸೋಮವಾರ ಅಧಿಕಾರ ಸ್ವೀಕರಿಸಿದರು.

ಇದಕ್ಕೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಭೋಪಾಲಿನ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಗೆ ಕೇಂದ್ರದ ವೀಕ್ಷಕರಾಗಿ ಅರುಣ್ ಸಿಂಗ್ ಮತ್ತು ವಿನಯ್ ಸಹಸ್ರಬುದ್ಧೆ ಅವರನ್ನು ನೇಮಿಸಲಾಗಿತ್ತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರು ದೆಹಲಿಯಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

ತೋಮರ್ ಶುಭಾಶಯ: ಸಿಎಂ ಸ್ಪರ್ಧೆಯಲ್ಲಿಧಿದ್ದಾರೆ ಎಂದು ಹೇಳಲಾಗಿದ್ದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಚೌಹಾಣ್ಗೆ ಶುಭಾಶಯ ಕೋರಿದರು.. ಈ ಮಧ್ಯೆ, ಬಿಜೆಪಿ ಹಿರಿಯ ಮುಖಂಡ ಗೋಪಾಲ್ ಭಾರ್ಗವ್ ಅವರು ಪ್ರತಿಪಕ್ಷ ನಾಯಕ  ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಾಂಗ್ರೆಸ್ಸಿನ  ಮಾಜಿ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ  ಅವರು,  ಮಾಜಿ ಮುಖ್ಯಮಂತ್ರಿ ಕಮಲನಾಥ್  ವಿರುದ್ಧ ಬಂಡಾಯವೆದ್ದು ಪಕ್ಷ ತೊರೆಯುವುದರೊಂದಿಗೆ ೧೫ ತಿಂಗಳ ಕಾಂಗ್ರೆಸ್ ಸರ್ಕಾರ  ಸಂಕಷ್ಟಕ್ಕೆ ಸಿಲುಕಿತ್ತು. ಸಿಂಧಿಯಾ ನಿಷ್ಠರಾದ  ೨೨ ಶಾಸಕರೂ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಸರ್ಕಾರ  ಅಲ್ಪಮತಕ್ಕೆ ಕುಸಿದು ಪತನಗೊಂಡಿತು. ಇದರ ಬೆನ್ನಲ್ಲೇ ಕಮಲನಾಥ್   ರಾಜೀನಾಮೆ ನೀಡಿದ್ದರು.

No comments:

Advertisement