ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ ೫೩ಕ್ಕೆ
ನವದೆಹಲಿ: ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡು ಗುರು ತೇಜ್ ಬಹಾದುರ್ ಆಸ್ಪತ್ರೆಗೆ ದಾಖಲಾಗಿದ್ದ ೬ ಮಂದಿ ಸಾವನ್ನಪ್ಪುವುದರೊಂದಿಗೆ ಹಿಂಸಾಚಾರಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 2020 ಮಾರ್ಚ್ 05ರ ಗುರುವಾರ ೫೩ಕ್ಕೆ ಏರಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದವು.
ಗಲಭೆಗೆ ಸಂಬಂಧಿಸಿದಂತೆ ಈವರೆಗೆ ೬೫೪ ಪ್ರಕರಣಗಳನ್ನು ದಾಖಲಿಸಲಾಗಿದ್ದು, ೧೮೨೦ ವ್ಯಕ್ತಿಗಳನ್ನು ಬಂಧಿಸಲಾಗಿಯಿತು.
ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡಿರುವ ಕೌನ್ಸಿಲರ್ ತಾಹಿರ್ ಹುಸೇನ್ ಅವರನ್ನು ಗುರುವಾರ ದೆಹಲಿಯಲ್ಲಿ ನ್ಯಾಯಾಲಯಕ್ಕೆ ಶರಣಾಗಲು ಬಂದಾಗ ಬಂಧಿಸಲಾಗಿದ್ದು, ದೆಹಲಿ ಅಪರಾಧ ಪೊಲೀಸರು ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡಿರುವ ಕೌನ್ಸಿಲರ್ ತಾಹಿರ್ ಹುಸೇನ್ ಅವರನ್ನು ಗುರುವಾರ ದೆಹಲಿಯಲ್ಲಿ ನ್ಯಾಯಾಲಯಕ್ಕೆ ಶರಣಾಗಲು ಬಂದಾಗ ಬಂಧಿಸಲಾಗಿದ್ದು, ದೆಹಲಿ ಅಪರಾಧ ಪೊಲೀಸರು ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
No comments:
Post a Comment