Wednesday, May 6, 2020

ಲಾಕ್‌ಡೌನ್ ೩.೦ ಬಳಿಕ ಮುಂದೇನು: ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

ಲಾಕ್ಡೌನ್  . ಬಳಿಕ ಮುಂದೇನು: ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ
ನವದೆಹಲಿ: ರಾಷ್ಟ್ರವ್ಯಾಪಿ ದಿಗ್ಬಂಧನವು (ಲಾಕ್ ಡೌನ್) ಎಷ್ಟು ಸಮಯ ಮುಂದುವರೆಯಬೇಕು ಎಂಬುದನ್ನು ನಿರ್ಧರಿಸಲು ಸರ್ಕಾರವು ಯಾವ ಮಾನದಂಡವನ್ನು ಅನುಸರಿಸುತ್ತಿದೆ ಎಂಬುದಾಗಿ ಪಕ್ಷವು ತಿಳಿಯಬಯಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2020 ಮೇ  06ರ ಬುಧವಾರ ಹೇಳಿದರು.

ಸೋನಿಯಾ ಗಾಂಧಿಯವರು ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮೇ ೧೭ರ ಬಳಿಕ ಏನು? ಮತ್ತು ಮೇ ೧೭ರ ಬಳಿಕ ಹೇಗೆ? ಲಾಕ್ ಡೌನ್ ಎಷ್ಟು ಸಮಯ ಮುಂದುವರೆಯಬೇಕು ಎಂದು ತೀರ್ಮಾನಿಸಲು ಸರ್ಕಾರ ಅನುಸರಿಸುತ್ತಿರುವ ಮಾನದಂಡ ಏನು?’ ಎಂದು ಸೋನಿಯಾ ಪ್ರಶ್ನಿಸಿದರು.

ಸಭೆಯಲ್ಲಿ ಹಾಜರಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರುಲಾಕ್ ಡೌನ್ . ಬಳಿಕ ಏನಾಗಲಿದೆ ಎಂಬುದಾಗಿ ನಾವು ತಿಳಿದುಕೊಳ್ಳಬೇಕಾದ ಅಗತ್ಯ ಇದೆಎಂದು ಹೇಳಿದರು.

ಸೋನಿಯಾ ಗಾಂಧಿಯವರು ಕೊರೋನಾವೈರಸ್ ಸಾಂಕ್ರಾಮಿಕದ ಪರಿಣಾಮ ಬಗ್ಗೆ ಪಕ್ಷದ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿದರು ಮತ್ತು ಸಾಂಕ್ರಾಮಿಕವನ್ನು ತಡೆಯಲು ಕೈಗೊಳ್ಳಲಾಗಿರುವ ಕ್ರಮಗಳ ಅಂದಾಜು ಮಾಡಿದರು.

ವಲಸೆ ಕಾರ್ಮಿಕರು, ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡ ಕಾರ್ಮಿಕರ ವಿಷಯದ ಬಗೆಗೂ ಸೋನಿಯಾ ಗಾಂಧಿ ಚರ್ಚಿಸಿದರು. ಕಾರ್ಮಿಕರನ್ನು ತಮ್ಮ ಹುಟ್ಟೂರುಗಳಿಗೆ ಕರೆದೊಯ್ಯಲು ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗೆಗೂ ಸೋನಿಯಾ ಚರ್ಚಿಸಿದರು. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂದಿ ಅವರು ಸಭೆಯಲ್ಲಿ ಹಾಜರಿದ್ದರು.

ರಾಷ್ಟ್ರದ ವಿವಿಧ ಕಡೆಗಳಲ್ಲಿ ತಮ್ಮ ಹುಟ್ಟೂರುಗಳಿಗೆ ಹೋಗಬಯಸಿರುವ ವಲಸೆ ಕಾರ್ಮಿಕರ ರೈಲ್ವೇ ಪಯಣ ದರವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳು ಭರಿಸಲಿವೆ ಎಂದು ಸೋನಿಯಾ ಗಾಂಧಿ ಸೋಮವಾರ ಪ್ರಕಟಿಸಿದ್ದರು. ಕೇಂದ್ರ ಸರ್ಕಾರವು ವಲಸೆ ಕಾರ್ಮಿಕರಿಂದ ರೈಲ್ವೇ ಪಯಣ ದರ ವಸೂ ಮಾಡುತ್ತಿದೆ ಎಂದು ಸೋನಿಯಾ ಗಾಂಧಿ ಆಪಾದಿಸಿದ್ದರು.

ಸಿಕ್ಕಿಹಾಕಿಕೊಂಡ ಕಾರ್ಮಿಕರನ್ನು ಅವರ ಹುಟ್ಟೂರುಗಳಿಗೆ ಸುರಕ್ಷಿತವಾಗಿ ಮತ್ತು ಉಚಿತವಾಗಿ ತಲುಪಿಸಲು ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷರು  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾರ್ಚ್ ೨೩ರಿಂದ ಈವರೆಗೆ  ಪತ್ರಗಳನ್ನು ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ಸಿಕ್ಕಿಹಾಕಿಕೊಂಡ ವಲಸೆ ಕಾರ್ಮಿP ವಿಷಯವನ್ನು ಪದೇ ಪದೇ ಪ್ರಸ್ತಾಪ ಮಾಡುತ್ತಿದೆ. ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ವಾಪಸ್ ಕಳುಹಿಸುವಲ್ಲಿ ಕೇಂದ್ರ ಸರ್ಕಾರ ಮಾನವೀಯ ನೀತಿ ರೂಪಿಸುವಲ್ಲಿ ವಿಫಲವಾಗಿದೆ ಎಂಬುದಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಆಪಾದಿಸಿದ್ದರು.

ಕೊರೋನಾವೈರಸ್ ಬಿಕ್ಕಟ್ಟಿನಿಂದ ಉದ್ಭವಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವ ಸಲುವಾಗಿ ಸೋನಿಯಾ ಗಾಂಧಿಯವರು ಮನಮೋಹನ್ ಸಿಂಗ್ ನೇತೃತ್ವದಲ್ಲಿ ೧೧ ಸದಸ್ಯ ಸಲಹಾ ಸಮಿತಿಯೊಂದನ್ನು ಕೂಡಾ ರಚಿಸಿದ್ದರು.

No comments:

Advertisement