Thursday, August 13, 2020

ಮಹಂತ ನೃತ್ಯ ಗೋಪಾಲದಾಸ್‌ಗೆ ಕೊರೋನಾ ಸೋಂಕು

 ಮಹಂತ ನೃತ್ಯ ಗೋಪಾಲದಾಸ್ಗೆ ಕೊರೋನಾ ಸೋಂಕು

ನವದೆಹಲಿ: ರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ಮಹಂತ ನೃತ್ಯ ಗೋಪಾಲ ದಾಸ್ ಅವರಿಗೆ 2020 ಆಗಸ್ಟ್ 13ರ ಗುರುವಾರ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಗುಡಗಾಂವದ ಮೇದಂತ ಆಸ್ಪತ್ರೆಗೆ ಸೇರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿದವು.

ಪ್ರಸ್ತುತ ಮಥುರಾದಲ್ಲಿರುವ ದಾಸ್ ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಅವರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ಕರೆಸಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿದವು.

ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆಯೋಜಿಸುವ ಸಲುವಾಗಿ ೮೦ರ ಹರೆಯದ ದಾಸ್ ಮಥುರಾಕ್ಕೆ ಹೋಗಿದ್ದರು.

ಆಗಸ್ಟ್ ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆನಂದಿಬೆನ್ ಪಟೇಲ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ ಭಾಗವತ್ ಉಪಸ್ಥಿತರಿದ್ದರು.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾವೈರಸ್ ಸೋಂಕು ತಗುಲಿದ ಸುದ್ದಿ ಬಂದಿದೆ ಎಂದು ತಿಳಿಸಿದರು.

ಆದಿತ್ಯನಾಥ್ ಅವರು ಮೇದಂತ ಆಸ್ಪತ್ರೆಯ ಡಾ.ನರೇಶ್ ಟ್ರಹಾನ್ ಅವರೊಂದಿಗೆ ಮಾತನಾಡಿ, ದಾಸ್ ಅವರಿಗೆ ತತ್ಕ್ಷಣ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡಲು ವಿನಂತಿಸಿದರು.

ಮುಖ್ಯಮಂತ್ರಿಯವರು ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್, ಗೋಪಾಲ ದಾಸ್ ಅವರ ಅನುಯಾಯಿಗಳು ಮತ್ತು ಮೇದಾಂತ ಆಸ್ಪತ್ರೆಯ ಮುಖ್ಯಸ್ಥರ ಜೊತೆಗೂ ಮಾತನಾಡಿ ದಾಸ್ ಅವರಿಗೆ ತ್ವರಿತ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿತು.

ರೋಗಿಗೆ ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ವೈದ್ಯಕೀಯ ನೆರವು ನೀಡುವಂತೆ ಅವರು ಮಥುರಾ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿಕೆ ಹೇಳಿತು.

ಫೆಬ್ರವರಿ ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆಯನ್ನು ಘೋಷಿಸಿದ ಬಳಿಕ, ದಾಸ್ ಅವರನ್ನು ಅದರ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆಗೆ ಇದನ್ನು ಸ್ಥಾಪಿಸಲಾಗಿತ್ತು.

ಕಳೆದ ವಾರ, ಪ್ರಧಾನಿ ಮೋದಿ ಅವರು ಮಂದಿರ ಶಿಲಾನ್ಯಾಸದ ಸಲುವಾಗಿ ಬೆಳ್ಳಿಯ ಇಟ್ಟಿಗೆಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು.

ಶ್ರೀರಾಮನ ಜನ್ಮಸ್ಥಾನ ಎಂಬುದಾಗಿ ನಂಬಲಾದ ಸ್ಥಳದಲ್ಲಿ ವಿವಾದಾತ್ಮಕ ಬಾಬರಿ ಮಸೀದಿ ಕಟ್ಟಡವಿದ್ದ ಸ್ಥಳದಲ್ಲೇ ರಾಮಮಂದಿರವನ್ನು ನಿರ್ಮಿಸಲಾಗುತ್ತಿದೆ.

 

No comments:

Advertisement