Wednesday, October 28, 2020

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ

 ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ

ನವದೆಹಲಿ:  ತಮಗೆ ಕೊರೊನಾವೈರಸ್ ಸೋಂಕು ತಗುಲಿರುವುದಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ 2020 ಅಕ್ಟೋಬರ್ 28ರ ಬುಧವಾರ ಮಾಹಿತಿ ನೀಡಿದರು.

ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸುದ್ದಿಯನ್ನು ಪ್ರಕಟಿಸಿದ ಅವರು, ಇತ್ತೀಚಿನ ದಿನಗಳಲ್ಲಿ ತಮ್ಮೊಂದಿಗೆ  ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ಬೇಗನೆ ಪರೀಕ್ಷಿಸಿಕೊಳ್ಳುವಂತೆ ಸೂಚಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪುಟ ಸಚಿವರಾಗಿರುವ ಸ್ಮೃತಿ ಇರಾನಿ, ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಲುವಾಗಿ ಪಕ್ಷದ ಪರ ಶನಿವಾರ ಪ್ರಚಾರ ನಡೆಸಿದ್ದರು.

No comments:

Advertisement