ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ಸ್ವಾಮಿ..
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ
ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಜುಲೈ ೧೯ರ ಶನಿವಾರ
ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷವಾದ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಬಡಾವಣೆಯ ಹಿರಿಯ ನಿವಾಸಿಗಳಲ್ಲಿ ಒಬ್ಬರಾದ ಶ್ರೀ ಕೃಷ್ಣೋಜಿ ರಾವ್ ಅವರ ಜನ್ಮದಿನದ ಪ್ರಯುಕ್ತ ರಾವ್ ಕುಟುಂಬ ಸದಸ್ಯರು ದೇವರಿಗೆ ವಿಶೇಷ ಬೆಣ್ಣೆ ಅಲಂಕಾರ, ವಿಶೇಷ ಪೂಜಾ ಸೇವೆಯನ್ನು ಹಮ್ಮಿಕೊಂಡಿದ್ದರು.
ದೇವಾಲಯದಲ್ಲಿಯೇ ರಾವ್ ಅವರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದ ಚಿತ್ರಗಳು ಹಾಗೂ ವಿಡಿಯೋ ಇಲ್ಲಿವೆ.
ಹೆಚ್ಚಿನ ಸುದ್ದಿಗಳಿಗಾಗಿ:


No comments:
Post a Comment