Showing posts with label Panchalingeshwara. Show all posts
Showing posts with label Panchalingeshwara. Show all posts

Friday, January 23, 2026

ಪಂಚಲಿಂಗೇಶ್ವರನ ಅವಭೃತ

 ಪಂಚಲಿಂಗೇಶ್ವರನ ಅವಭೃತ

ವಭೃತ (ದೇವನಾಗರಿಯಲ್ಲಿ ʼವಭೃʼ) ಎಂದರೆ ವೈದಿಕ ಯಜ್ಞಗಳು ಅಥವಾ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಯಜಮಾನನು ಮಾಡುವ ಪವಿತ್ರವಾದ ಮಂಗಳಸ್ನಾನ. ಇದು ಯಜ್ಞದ ಸಮಾಪ್ತಿಯನ್ನು ಸೂಚಿಸುವ ವಿಧಿಯಾಗಿದ್ದು, ಪಾಪ ಪರಿಹಾರ ಮತ್ತು ಶುದ್ಧೀಕರಣದ ಸಂಕೇತ. 


ಅವಭೃತದ ಮುಖ್ಯಾಂಶಗಳು:

  • ಯಜ್ಞಾಂತ ಸ್ನಾನ: ಪ್ರಧಾನ ಯಾಗ ಅಥವಾ ಯಜ್ಞ ಪೂರ್ಣಗೊಂಡ ನಂತರ ಮಾಡಲಾಗುವ ವಿಶೇಷ ಜಳಕ.
  • ಶುದ್ಧೀಕರಣ: ಯಜ್ಞದ ಸಮಯದಲ್ಲಿ ಉಂಟಾಗಬಹುದಾದ ದೋಷಗಳನ್ನು ಕಳೆದು, ಯಜಮಾನನನ್ನು ಶುದ್ಧಗೊಳಿಸುವ ಪ್ರಕ್ರಿಯೆ.
  • ಮಂಗಳ ಕಾರ್ಯ: ಇದು ಯಜ್ಞದ ಮುಕ್ತಾಯದ ಸೂಚಕವಾಗಿದ್ದು, ಯಶಸ್ಸನ್ನು ಸೂಚಿಸುತ್ತದೆ.
  • ನದಿ/ತೀರ್ಥ ಸ್ನಾನ: ಸಾಮಾನ್ಯವಾಗಿ ಹರಿಯುವ ನದಿ ಅಥವಾ ಪವಿತ್ರ ತೀರ್ಥಗಳಲ್ಲಿ ಈ ಸ್ನಾನವನ್ನು ಆಚರಿಸಲಾಗುತ್ತದೆ. 

ಸರಳವಾಗಿ ಹೇಳುವುದಾದರೆಯಜ್ಞದ ಕೊನೆಯಲ್ಲಿ ಆಚರಿಸಲಾಗುವ ಸಮಾರೋಪ ಸ್ನಾನವೇ 'ಅವಭೃತ'. ದೇವಾಲಯದ ವಾರ್ಷಿಕೋತ್ಸವ, ಜಾತ್ರೆ, ಆಯನ ಕೂಡಾ ದೇವರ ಶಕ್ತಿಯನ್ನು ಜಾಗೃತಗೊಳಿಸುವ ಯಜ್ಞ, ಹಾಗಾಗಿಯೇ ಆಯನದ ಕೊನೆಗೆ ಅವಭೃತ ನಡೆಯುತ್ತದೆ.

ವಿಟ್ಲಾಯನದ ಸಡಗರದ ರಥೋತ್ಸವದ ಮರುದಿನ ಕೊಡಂಗಾಯಿ ಹೊಳೆಯಲ್ಲಿ ವಿಟ್ಲದೊಡೆಯ ಪಂಚಲಿಂಗೇಶ್ವರನ ಅವಭೃತ ನಡೆಯುತ್ತದೆ. ಈ ಅವಭೃತಕ್ಕಾಗಿ ದೇವಸ್ಥಾನದಿಂದ ಕೊಡಂಗಾಯಿವರೆಗೆ ಸಾಗುವಾಗ  ದೇವಸ್ಥಾನದ ಕಟ್ಟೆಯಿಂದ ತೊಡಗಿ, ವಿವಿಧ ಕಟ್ಟೆಗಳಲ್ಲಿ ಪಂಚಲಿಂಗೇಶ್ವರನಿಗೆ ಪೂಜೆ ಸಲ್ಲುತ್ತದೆ. ಪ್ರತಿವರ್ಷವೂ ಈ ಕಟ್ಟೆಗಳಿಗೆ ದೇವರು ಬರುವ ಹೊತ್ತಿನಲ್ಲಿ ಆಸುಪಾಸಿನ ಜನರು ಭಕ್ತಿ ಪೂರ್ವಕವಾಗಿ ನೆರೆದು ಭಗವಂತನಿಗೆ ಕೈ ಮುಗಿಯುತ್ತಾರೆ.

ಅವಭೃತಕ್ಕಾಗಿ ಪಂಚಲಿಂಗೇಶ್ವರನು ಸಾಗುವ ದೃಶ್ಯದ ವಿಡಿಯೋ ಹಾಗೂ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಸಮೀಪದ ನೆತ್ರಕೆರೆಯ ಎರಡು ಕಟ್ಟೆಗಳಲ್ಲಿ ನಡೆದ ಪಂಚಲಿಂಗನ ಪೂಜೆಯ ಚಿತ್ರ, ವಿಡಿಯೋಗಳು ಮೇಲಿವೆ. (ಚಿತ್ರ, ವಿಡಿಯೋ ಕೃಪೆ: ಸದಾಶಿವ ಬನ, ವಿಟ್ಲ ಸುದ್ದಿಗಳು ಗ್ರೂಪ್‌, ನೆತ್ರಕೆರೆ ಮಠ ಗ್ರೂಪ್)

ಅವಭೃತದ ಮರುದಿನ ಧ್ವಜಾವರತಣದೊಂದಿಗೆ ವಿಟ್ಲಾಯನದ ಸಡಗರ ಕೊನೆಗೊಳ್ಳುತ್ತದೆ.

Thursday, January 22, 2026

ವಿಟ್ಲ ತೇರಿನ ಸುಂದರ ಕ್ಷಣ!

 ವಿಟ್ಲ ತೇರಿನ ಸುಂದರ ಕ್ಷಣ!

ವಿಟ್ಲಾಯನದ ಮಹತ್ವದ ದಿನ ವಿಟ್ಲ ತೇರು ಮತ್ತು ಬೆಡಿಯ ದಿನ. ೨೦೨೬ರ ಜನವರಿ ೨೧ರಂದು ಈ ಸಂಭ್ರಮದ ಹೊತ್ತು.

ವಿಟ್ಲ ತೇರಿನ ಸುಂದರ ಕ್ಷಣದ ವಿಡಿಯೋ ಇಲ್ಲಿದೆ 👇👇.


ಇದನ್ನೂ ನೋಡಿ:

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

Thursday, January 15, 2026

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

 ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

ವಿಟ್ಲದ ಸಹಸ್ರಾರು ವರ್ಷಗಳ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯು ಸಡಗರದೊಂದಿಗೆ ೨೦೨೬ ಜನವರಿ ೧೪ರ ಬುಧವಾರ ಮಕರ ಸಂಕ್ರಾಂತಿಯ ಶುಭದಿನ ಆರಂಭವಾಯಿತು. ವಿಟ್ಲ ಪಂಚಲಿಂಗೇಶ್ವರ ಜಾತ್ರೆಯು ಆಸುಪಾಸಿನಲ್ಲಿ ʼವಿಟ್ಲಾಯನʼ ಎಂದೇ ಖ್ಯಾತಿ ಪಡೆದಿದೆ.

ಧ್ವಜಾರೋಹಣದೊಂದಿಗೆ ಆರಂಭವಾದ ಜಾತ್ರಾ ಸಡಗರವು ಜನವರಿ ೨೧ರವರೆಗೆ ಮುಂದುವರಿಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಭಕ್ತರನ್ನು ಮುದಗೊಳಿಸಲಿವೆ.

ಜಾತ್ರೋತ್ಸವ ಸಡಗರದ ವಿವಿಧ ಸಂದರ್ಭದ ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ. (ಚಿತ್ರ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್)




 

Wednesday, November 21, 2012

Vittla Temple Rathayathra started... ಹೊರಟಿತಿದೋ ವಿಟ್ಲ ದೇಗುಲದ ರಥಯಾತ್ರೆ...


Vittla Temple Rathayathra started...
ಹೊರಟಿತಿದೋ ವಿಟ್ಲ ದೇಗುಲದ ರಥಯಾತ್ರೆ
...


ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ನಾಂದಿ.

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ 'ರಥಯಾತ್ರೆ'ಗೆ 2012 ನವೆಂಬರ್ 19ರ ಸೋಮವಾರ ಚಾಲನೆ ನೀಡಲಾಯಿತು. ನವೀಕರಣಗೊಂಡಿರುವ ದೇವಸ್ಥಾನದ ಬ್ರಹ್ಮಕಲಶೋತ್ಸವವು 2013ರ ಜನವರಿ 9ರಿಂದ 24ರವರೆಗೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ರಥಯಾತ್ರೆಯು ವಿಟ್ಲ ಸೀಮೆಯ ಎಲ್ಲ 16 ಗ್ರಾಮಗಳಲ್ಲಿ ಸಂಚರಿಸಲಿದೆ.
ವಿಟ್ಲದ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾದರಿಯುಳ್ಳ ಈ 'ರಥ'ವು ನವೆಂಬರ್ 29ರವರೆಗೆ ಸೀಮೆಯ ಹದಿನಾರೂ ಗ್ರಾಮಗಳಲ್ಲಿ ಸಂಚರಿಸಿ ನವೆಂಬರ್ 30ರಂದು ಪುರ ಪ್ರವೇಶ ಮಾಡುವುದು.
ನವೆಂಬರ್ 30ರಂದು ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯುವುದು.
ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ನಡೆದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು 'ಸಹಸ್ರಾರು ವರ್ಷಗಳಿಗೆ ಶಾಶ್ವತ ಎಂಬಂತೆ ಅಧ್ಭುತವಾಗಿ ನಿರ್ಮಾಣಗೊಂಡಿರುವ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗಿಗಳಾಗುವ ಸದವಕಾಶ ಒದಗಿ ಬಂದಿರುವುದು ಭಕ್ತರ ಪಾಲಿಗೆ ಪುಣ್ಯದ ವಿಷಯ' ಎಂದು ಹೇಳಿದರು.
'ದೇವರ ಎದುರು ಎಲ್ಲ ಸ್ತರದವರೂ ಒಂದೇ. ರಥದ ಮೂಲಕ ಶ್ರೀಪಂಚಲಿಂಗೇಶ್ವರ ದೇಗುಲವೇ ಸೀಮೆಯ ಎಲ್ಲ ಹದಿನಾರೂ ಗ್ರಾಮಗಳಲ್ಲಿ ಸಂಚರಿತ್ತಿರುವುದು ಒಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಅವರು ನುಡಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ 'ಭಾವನಾತ್ಮಕ ಸಂಬಂಧ ಬೆಸೆಯಲು ರಥಯಾತ್ರೆ ಪೂರಕವಾಗಿದೆ. ಧರ್ಮದ ಮೂಲಕ ಗಳಿಸಿದುದನ್ನು ಧರ್ಮಯುತ ಕಾರ್ಯಕ್ಕಾಗಿ ಸಧ್ವಿನಿಯೋಗ ಮಾಡಿ' ಎಂದು ಕರೆ ನೀಡಿದರು.
ಬ್ರಹ್ಮಕಲಶೋತ್ಸವ ಅಧ್ಯಕ್ಷ ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್. ಕೂಡೂರು ಪ್ರಾಸ್ತಾವಿಕ ಭಾಷಣ ಮಾಡಿ ರಥಯಾತ್ರೆ ಕಾರ್ಯಕ್ರಮದ ವಿವರ ನೀಡಿದರು.
ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಚ್. ಜಗನ್ನಾಥ ಸಾಲಿಯಾನ್ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಚಿತ್ರ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಹೊಸನಗರದ ಶ್ರೀ ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ನವೆಂಬರ್ 19ರ ಸೋಮವಾರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿದರು. ಅದ್ಭುತವಾಗಿ ಮತ್ತೆ ತಲೆ ಎತ್ತಿ ನಿಂತಿರುವ ದೇವಸ್ಥಾನದ ವಿಹಂಗಮ ನೋಟವನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
(ಚಿತ್ರ ಮಾಹಿತಿ ಕೃಪೆ: ಪ್ರಜಾವಾಣಿ ಮಂಗಳೂರು ಆವೃತ್ತಿ ದಿನಾಂಕ 20 ನವೆಂಬರ್ 2012).


Advertisement